2ನೇ ಪಂದ್ಯಕ್ಕೂ ವೀರೂ ಅಲಭ್ಯ
ನವದೆಹಲಿ: ಡೆಲ್ಲಿ ಡೇರ್ಡೆವಿಲ್ಸ್ ತಂಡದ ಸ್ಪೋಟಕ ಆರಂಭಿಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್ ಬೆನ್ನು ನೋವಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲೂ ಆಡುತ್ತಿಲ್ಲ.
ಸೆಹ್ವಾಗ್ ಗಾಯದಿಂದ ಸಂಪೂರ್ಣ ಗುಣಮುಖರಾಗದೆ 2ನೇ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ತಂಡದ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ತಿಳಿಸಿದ್ದಾರೆ.