'ಐಪಿಎಲ್ನಲ್ಲಿ ಪಾಕ್ ಕ್ರಿಕೆಟಿಗರಿಗೆ ಅವಕಾಶ ನೀಡಿ'
ಕರಾಚಿ: ಐಪಿಎಲ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ಆಟಗಾರರಿಗೂ ಭಾಗವಹಿಸಲು ಅವಕಾಶ ನೀಡಬೇಕೆಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸೀಂ ಅಕ್ರಂ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಮನವಿ ಮಾಡಿದ್ದಾರೆ. ಐಪಿಎಲ್ನಲ್ಲಿ ಪಾಕಿಸ್ತಾನದ ಕ್ರಿಕೆಟಿಗರೂ ಭಾಗವಹಿಸಿದರೆ, ಪಂದ್ಯಾವಳಿಗೆ ಹೊಸ ರಂಗು ತುಂಬಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ. 'ಕ್ರೀಡೆ ಹಾಗೂ ರಾಜಕೀಯ - ಎರಡನ್ನೂ ಬೇರೆ ಬೇರೆಯಾಗಿಯೇ ನೋಡಬೇಕು. ಇದೇ ಧ್ಯೇಯವನ್ನು ಬಿಸಿಸಿಐ ಸಹ ಒಪ್ಪಿ, ಪಾಕಿಸ್ತಾನದ ಆಟಗಾರಿಗೆ ಐಪಿಎಲ್ನಲ್ಲಿ ಭಾಗವಹಿಸಲು ಅವಕಾಶ ನೀಡಬೇಕು' ಎಂದು ಅವರು ಆಗ್ರಹಿಸಿದರು.