ತಮಿಳುನಾಡಿಗೆ ವಿಶ್ವ ಚೆಸ್ ಪಂದ್ಯಾವಳಿ
ಚೆನ್ನೈ: ಇದೇ ವರ್ಷ ನವೆಂಬರ್ನಲ್ಲಿ ನಡೆಯಲಿರುವ ವಿಶ್ವ ಚೆಸ್ ಚಾಂಪಿಯನ್ಷಿಪ್ಗೆ ತಮಿಳುನಾಡು ಆತಿಥ್ಯ ವಹಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಜಯಲಲಿತಾ ರಾಜ್ಯ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.
ಈ ಪಂದ್ಯಾವಳಿ ನವೆಂಬರ್ 6 ರಿಂದ 26ರವರೆಗೆ ನಡೆಯಲಿದ್ದು, ಈ ಪಂದ್ಯಾವಳಿ ಆಯೋಜನೆಗೆ ಸರ್ಕಾರ 29 ಕೋಟಿ ನೀಡಲಿದೆ. ಮೊದಲ ಬಾರಿಗೆ ಈ ಪಂದ್ಯಾವಳಿಯನ್ನು ಭಾರತದಲ್ಲಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.