ರಾಹುಲ್ ದ್ರಾವಿಡ್ಗೆ ದಂಡ
ಜೈಪುರ: ಐಪಿಎಲ್ನ ಸೋಮವಾರದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ನಿಧಾನ ಗತಿಯ ಬೌಲಿಂಗ್ ಮಾಡಿದ ಹಿನ್ನಲೆಯಲ್ಲಿ ತಂಡದ ನಾಯಕ ರಾಹುಲ್ ದ್ರಾವಿಡ್ಗೆ 10.8 ಲಕ್ಷ ದಂಡ ವಿಧಿಸಲಾಗಿದೆ. ಜೈಪುರದಲ್ಲಿ ನಡೆದ ಕೆಕೆಆರ್ , ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ರಾಜಸ್ಥಾನ್ ತಂಡ ನಿಧಾನ ಗತಿಯ ಬೌಲಿಂಗ್ ಮಾಡಿದ ಹಿನ್ನಲೆಯಲ್ಲಿ ತಂಡದ ನಾಯಕ ದ್ರಾವಿಡ್ಗೆ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.