ಚೆನ್ನೈಯಿಂದ ನಾಕೌಟ್ ಪಂದ್ಯಗಳ ಸ್ಥಳಾಂತರ ಸಾಧ್ಯತೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ 6ನೇ ಆವೃತ್ತಿಯ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳನ್ನು ಐಪಿಎಲ್ ಆಡಳಿತ ಮಂಡಳಿ ಚೆನ್ನೈಯಿಂದ ಸ್ಥಳಾಂತರಿಸುವ ಸಾಧ್ಯತೆಗಳಿವೆ.
ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳಲ್ಲಿ ಶ್ರೀಲಂಕಾ ಆಟಗಾರರು ಭಾಗವಹಿಸಲು ಅನುಮತಿ ನೀಡಿಲ್ಲವಾದ್ದರಿಂದ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ.
ಸೋಮವಾರ ಚೆನ್ನೈನಲ್ಲಿ ಸಭೆ ಸೇರುತ್ತಿರುವ ಐಪಿಎಲ್ ಆಡಳಿತ ಮಂಡಳಿ ಪಂದ್ಯಗಳನ್ನು ಸ್ಥಾಳಂತರಿಸುವ ಬೆಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ. ಏಪ್ರಿಲ್ 22ರಂದ ಚೆನ್ನೈನಲ್ಲಿ ಡೆಯಲಿರುವ ಆಡಳಿತ ಮಂಡಳಿಯ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಹೇಳಿದ್ದರು.