ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಬಾಂಗ್ಲಾದೇಶ ಬಗ್ಗುಬಡಿದ ಜಿಂಬಾಬ್ವೆ

Mainashree
Updated On : 21 Apr 2013, 1:18 am

ಹರಾರೆ: ಬ್ರೆಂಡನ್ ಟೇಲರ್ ಎರಡೂ ಇನಿಂಗ್ಸ್‌ಗಳಲ್ಲಿ ದಾಖಲಿಸಿದ ಶತಕಗಳ ನೆರವಿನೊಂದಿಗೆ ಜಿಂಬಾಬ್ವೆ ತಂಡ, ಬಾಂಗ್ಲಾ ದೇಶದ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 335 ರನ್‌ಗಳ ಭಾರಿ ಅಂತರದಿಂದ ವಿಜಯ ಸಾಧಿಸಿತು.
ಇದರೊಂದಿಗೆ ಮೊದಲ ಇನಿಂಗ್ಸ್‌ನಲ್ಲಿ 171 ಮತ್ತು ದ್ವಿತೀಯ ಇನಿಂಗ್ಸ್‌ನಲ್ಲಿ ಅಜೇಯ 102 ಅಮೋಘ ಶತಕ ಗಳಿಸಿದ್ದ ಟೇಲರ್ ಟೆಸ್ಟ್ ಪಂದ್ಯವೊಂದರ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ಜಿಂಬಾಬ್ವೆಯ 3ನೇ ಬ್ಯಾಟ್ಸ್‌ಮನ್ ಎನಿಸಿದರು.
ದ್ವಿತೀಯ ಇನಿಂಗ್ಸ್‌ನಲ್ಲಿ 483 ರನ್‌ಗಳ ಸವಾಲನ್ನು ಬೆನ್ನಟ್ಟಿದ್ದ ಬಾಂಗ್ಲಾ ತಂಡ ಕೇವಲ 147 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ ಪ್ರವಾಸಿ ಬಾಂಗ್ಲಾ ಭಾರೀ ಅಂತರದಿಂದ ಸೋಲೊಪ್ಪಿಕೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement