ಕ್ರೀಡೆ

ಲಂಕಾ-ಆಸೀಸ್ ಪಂದ್ಯ ರದ್ದು: ಐಸಿಸಿಗೆ ಪತ್ರ

ಮೆಲ್ಬರ್ನ್: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇತ್ತೀಚೆಗೆ ನಡೆದಿದ್ದ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ಪಂದ್ಯವನ್ನು ಮಧ್ಯದಲ್ಲೇ ರದ್ದುಗೊಳಿದ್ದರ ಹಿನ್ನೆಲೆಯಲ್ಲಿ, ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ (ಸಿಎ) ಮುಖ್ಯಸ್ಥ ಜೇಮ್ಸ್ ಸದರ್‌ಲ್ಯಾಂಡ್ ಐಸಿಸಿಗೆ ಪತ್ರ ಬರೆದಿದ್ದಾರೆ. ಕಳೆದ ತಿಂಗಳು ನಡೆದಿದ್ದ ಈ ಪಂದ್ಯದ ಮಧ್ಯದಲ್ಲಿ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಪಡಿಸಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಿಎ, ಮಳೆಯಿಂದಾಗಿ ಅರ್ಧಕ್ಕೇ ನಿಂತ ಪಂದ್ಯವನ್ನು ಪುನರಾಂಭಿಸುವ ಕುರಿತಾಗಿ ಐಸಿಸಿ ನಿಗದಿಪಡಿಸಿರುವ ನಿಯಮಾವಳಿಗಳಲ್ಲಿ ಬದಲಾವಣೆ ತರಬೇಕೆಂದು ಹೇಳಿದೆ. ಮಳೆಯಿಂದಾಗಿ ಪಂದ್ಯವನ್ನು ಪುನಃ ಆರಂಭಿಸುವ ಹಾಗಿದ್ದರೂ, ನಿಯಮಾವಳಿಗಳನ್ನೇ ಆಧಾರವಾಗಿಟ್ಟುಕೊಂಡು ಅಂಪೈರ್‌ಗಳು ಪಂದ್ಯಗಳನ್ನು ರದ್ದುಗೊಳಿತ್ತಾರೆ. ಇದರಿಂದ, ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗುವುದಲ್ಲದೇ, ಅದರ ಖ್ಯಾತಿಗೂ ಕುಂದು ಬರುತ್ತದೆ ಎಂದು ಜೇಮ್ಸ್ ಪತ್ರದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!