ಕ್ರೀಡೆ

ಸೌರಭ್ ವರ್ಮಾಗೆ ಪ್ರಶಸ್ತಿ

ಬೆಂಗಳೂರು: ಆಕರ್ಷಕ ಪ್ರದರ್ಶನ ತೋರುವ ಮೂಲಕ ಎದುರಾಳಿಗೆ ಸೋಲುಣಿಸಿದ ಸೌರಭ್ ವರ್ಮಾ ನಗರದಲ್ಲಿ ಶನಿವಾರ ಮುಕ್ತಾಯಗೊಂಡ ಅಖಿಲ ಭಾರತ ಹಿರಿಯರ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಿಂಗಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡರು.
ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಸೌರಭ್ ಅವರು ಸಾಯಿ ಪ್ರಣೀತ್ ಅವರನ್ನು 21-17, 21-15 ನೇರ ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿದರು. ಪುರುಷರ ಡಬಲ್ಸ್ ವಿಭಾಗದಲ್ಲಿ ಅಲ್ವಿನ್ ಫ್ರೆಂಚ್ ಮತ್ತು ವಿ. ಡಿಜು ಜೋಡಿ, ಅಕ್ಷಯ್ ದಿವಾಲ್ಕರ್ ಮತ್ತು ಪ್ರಣವ್ ಜೆರ್ರಿ ಚೋಪ್ರಾ ಜೋಡಿಯನ್ನು 10-21, 21-18, 21-10 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಬಾಚಿಕೊಂಡಿತು.
ಇನ್ನು ಮಹಿಳೆಯರ ಸಿಂಗಲ್ಸ್‌ನಲ್ಲಿ ಮಹಾರಾಷ್ಟ್ರದ ಅರುಂಧತಿ ಪಂತ್ವಾನೆ ಅವರು ತನ್ವಿ ಲಾಡ್ ಅವರನ್ನು 21-16, 22-20 ನೇರ ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿದರು. ಮಹಿಳೆಯರ ಸಿಂಗಲ್ಸ್‌ನಲ್ಲಿ ಮನೀಶಾ ಕೆ ಮತ್ತು ಸನ್ನಿಯೋಗಿತ್ ಘೋರ್ಪಡೆ ಜೋಡಿ ಆರತಿ ಸರಾ ಮತ್ತು ಪ್ರಜಕ್ತಾ ಸಾವಂತ್ ಜೋಡಿಯನ್ನು 16-21, 23-21, 22-20 ಸೆಟ್‌ಗಳಿಂದ ಮಣಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಮಿಶ್ರ ಡಬಲ್ಸ್ ವಿಭಾಗದಲ್ಲಿ ಪ್ರಣವ್ ಜೆರ್ರಿ ಚೋಪ್ರಾ ಮತ್ತು ಮನಿಶಾ ಕೆ ಜೋಡಿ, ಅರುಣ್ ವಿಷ್ಣು ಮತ್ತು ಅಪರ್ಣಾ ಬಾಲನ್ ಜೋಡಿಯನ್ನು 21-15, 18-21, 22-20 ಸೆಟ್‌ಗಳಿಂದ ಪ್ರಯಾಸದ ಜಯ ಸಾಧಿಸಿ ಪ್ರಶಸ್ತಿ ಗೆದ್ದುಕೊಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!