ಕ್ರೀಡೆ

ಕುಸ್ತಿ: ಭಾರತಕ್ಕೆ 2 ಬೆಳ್ಳಿ ಪದಕ

ನವದೆಹಲಿ: ಭಾರತದ ಕುಸ್ತಿ ಪಟುಗಳಾದ ಗೀತಾ ಫೋಗತ್ ಮತ್ತು ಬಜ್ರಂಗ್ ಅವರು ಅಮರಿಕದಲ್ಲಿ ನಡೆದ ಡೇವ್ ಸುಲ್ತಾಜ್ ಸ್ಮಾರಕ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡರು.
ಗಾಯದಿಂದ ಬಳಲುತ್ತಿದ್ದ ಗೀತಾ ಅವರು 59ಕೆಜಿ ವಿಭಾಗದ ಫೈನಲ್‌ನಲ್ಲಿ ಚೀನಾ ಹ್ಯೂ ಲಿ ವಿರುದ್ಧ ಹೋರಾಡದೇ ಹಿಂದೆ ಸರಿದ ಪರಿಣಾಮ, ಬೆಳ್ಳಿಗೆ ತೃಪ್ತಿಪಟ್ಟರು. ಇನ್ನು ಪುರುಷರ ವಿಭಾಗದ 60ಕೆಜಿ ವಿಭಾಗದ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಹೂಕಿ ಮ್ಯಾಟ್ ಕ್ಲಬ್‌ನ ಡಿವೈನ್ ಕಾರ್ಟರ್ ಅವರನ್ನು ಪರಾಭವಗೊಳಿಸುವ ಮೂಲಕ ಬೆಳ್ಳಿ ಪದಕ ಗೆದ್ದುಕೊಂಡರು.
ಭಾರತದ ಇನ್ನೊಬ್ಬ ಸ್ಪರ್ಧಾಳು ಸಂದೀಪ್ ತಾಮರ್ ಅವರು 55ಕೆಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡರು.
ಆದರೆ, ಕಳೆದ ವರ್ಷ 55ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದ ಅಮಿತ್ ಕುಮಾರ್ ಅವರು ದ್ವಿತೀಯ ಸುತ್ತಿನಲ್ಲಿ ಮಾರ್ಕ್ ಮ್ಯಾಕ್‌ನೈಟ್ ವಿರುದ್ಧ ಸೋಲುವ ಮೂಲಕ ಕೈಚೆಲ್ಲಿದರು. ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಗೆದ್ದುಕೊಂಡ ಸುಶೀಲ್ ಕುಮಾರ್ ಗಾಯದ ಹಿನ್ನೆಯೆಲ್ಲಿ ಪಂದ್ಯಾವಳಿಯಲ್ಲಿ ಭಾಗವಹಿಸಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ