ಕ್ರೀಡೆ

ಚಳಿಗಾಲ ಒಲಿಂಪಿಕ್ಸ್: ಭಾರತಕ್ಕೆ 13 ಚಿನ್ನ


ನವದೆಹಲಿ: ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ವಿಶೇಷ ಒಲಿಂಪಿಕ್ಸ್ ವಿಶ್ವ ಚಳಿಗಾಲ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಭಾರತದ ಕ್ರೀಡಾಪಟುಗಳು 13 ಚಿನ್ನದ ಪದಕ ಸೇರಿದಂತೆ ಒಟ್ಟು 40 ಪದಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು 15 ಬೆಳ್ಳಿ ಮತ್ತು 12 ಕಂಚಿನ ಪದಕಗಳು ಭಾರತದ ಬುಟ್ಟಿಗೆ ಸೇರಿವೆ.
ಸೋಮವಾರ ನಡೆದ ಹಾಕಿ ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಚಿನ್ನದ ಪದಕ ಗೆದ್ದುಕೊಂಡರೆ, ಪುರುಷರ ಹಾಕಿ ತಂಡ ತೈಪೇ ವಿರುದ್ಧ 1-2 ಅಂತರದಿಂದ ಸೋಲುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತು. ಅಲ್ಪಿನೆ ಸ್ಕೀಯಿಂಗ್ ಗಿಯಾಂಟ್ ಸ್ಲಾಲೋಮ್ ವಿಭಾಗದಲ್ಲಿ ಭಾರತದ ಭಾಟಿಯಾ ಅವರು ಮೂರು ಚಿನ್ನದ ಪದಕಗಳೊಂದಿಗೆ ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅಲ್ಪಿನೆ ಸ್ಕೀಯಿಂಗ್ ಸೂಪರ್ ಗಿಯಾಂಟ್ ಸ್ಲಾಲೋಮ್ ವಿಭಾಗದಲ್ಲಿ ಲಖ್ನೌದ 12 ವರ್ಷದ ಅನಿಶ್ಕಾ ಉಪಾಧ್ಯಾಯ ಚಿನ್ನದ ಪದಕ ಗೆದ್ದುಕೊಂಡರು. ತಂಡ ವಿಭಾಗದಲ್ಲಿ ಭಾರತ ಮೂರು ಬೆಳ್ಳಿ ಹಾಗೂ ಮೂರು ಕಂಚಿನ ಪದಕ ಗೆದ್ದುಕೊಂಡಿದೆ. 14 ವರ್ಷದ ಬಿಪಾಶಾ ಮುಖರ್ಜಿ ಅವರು ಸ್ಪೀಡ್ ಸ್ಕೇಟಿಂಗ್‌ನ 25 ಮೀಟರ್ ವಿಭಾಗದಲ್ಲಿ ಚಿನ್ನ ಮತ್ತು 55 ಮೀಟರ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡರು. ಪಂದ್ಯಾವಳಿಯಲ್ಲಿ 120 ರಾಷ್ಟ್ರಗಳಿಂದ ಸುಮಾರು 2200 ಅಥ್ಲೀಟ್‌ಗಳು ಭಾಗವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!