ಕ್ರೀಡೆ

ಪಟೌಡಿ ಸ್ಮರಣಾರ್ಥ ವಾರ್ಷಿಕ ಉಪನ್ಯಾಸ

ನವದೆಹಲಿ: ಭಾರತದ ಮಾಜಿ ನಾಯಕ ಮನ್ಸೂರ್ ಅಲಿ ಖಾನ್ ಪಟೌಡಿ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ವಾರ್ಷಿಕ ಉಪನ್ಯಾಸವನ್ನು ಆಯೋಜಿಸಲು ನಿರ್ಧರಿಸಿದ್ದು, ಫೆ.20 ರಂದು ಚೆನೈನಲ್ಲಿ ಆರಂಭವಾಗಲಿರುವ ಈ ಸಮಾರಂಭವನ್ನು ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಉದ್ಘಾಟಿಸಲಿದ್ದಾರೆ. ಮನ್ಸೂರ್ ಅಲಿ ಖಾನ್ ಪಟೌಡಿ ಚೊಚ್ಚಲ ಸ್ಮರಣೆಯ ಉಪನ್ಯಾಸವನ್ನು ಸುನಿಲ್ ಗವಾಸ್ಕರ್ ಅವರು ಫೆ.20 ರಂದು ಚೆನೈನ ತಾಜ್ ಕೊರಮಂಡಲ್ ಹೋಟೆಲ್‌ನಲ್ಲಿ ನಡೆಸಲಿದ್ದಾರೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಈ ವಾರ್ಷಿಕ ಉಪನ್ಯಾಸವು ಭಾರತೀಯ ಕ್ರಿಕೆಟ್ ಋತುವಿನ ಭಾಗವಾಗಿದೆ. ಈ ಒಂದು ಕಾರ್ಯಕ್ರಮ ವಿಶ್ವದ ಎಲ್ಲಾ ಉಪನ್ಯಾಸಕರಿಗೂ ಈ ವರ್ಣರಂಜಿತ ಕ್ರೀಡೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡಲಿದೆ, ಕ್ರೀಡೆ ಹಂತ ಹಂತವಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ