ಡೆವಿಲ್ಸ್‌ಗೆ ಸ್ನೇಪ್ ಕೋಚ್
ನವದೆಹಲಿ: ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡಕ್ಕೆ ಹೊಸ ಕೋಚ್ ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ಮಾಜಿ ಆಟಗಾರ ಜೆರೆಮಿ ಸ್ನೇಪ್ ಅವರನ್ನು ತಂಡದ ಪ್ರದರ್ಶನ ಕೋಚ್ ಆಗಿ ನೇಮಕ ಮಾಡಲಾಗಿದೆ.
ದಕ್ಷಿಣ ಆಫ್ರಿಕಾ ತಂಡವನ್ನು ಟೆಸ್ಟ್‌ನಲ್ಲಿ ನಂ.1 ಪಟ್ಟಕ್ಕೆ ಕೊಂಡೊಯ್ದ ಕೋಚ್‌ಗಳಲ್ಲಿ ಒಬ್ಬರಾಗಿರುವ ಸ್ನೇಪ್ ಅವರು ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಕೋಚ್ ಹಾಗೂ ಸಹಾಯಕ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.