ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

18ರಿಂದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ

Rashmi Kasaragodu
Updated On : 15 Feb 2013, 10:41 am

ಬಾಗಲಕೋಟೆ: ತಾಲೂಕಿನ ಯಡಹಳ್ಳಿ ಗ್ರಾಮದ ಅಜಾತ ನಾಗಲಿಂಗೇಶ್ವರ ಯುವಕ ಸಂಘ ಹಾಗೂ ಗಜಾನನ ಯುವಕ ಸಂಘದಿಂದ ಫೆ.18ರಂದು ಸಂಜೆ 5 ಗಂಟೆಗೆ ಶಾಲಾ ಆವರಣದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಜೆಡಿಎಸ್ ಜಿಲ್ಲಾಧ್ಯಕ್ಷ ಬಸವಪ್ರಭು ಸರನಾಡಗೌಡ ಉದ್ಘಾಟಿಸಲಿದ್ದು, ನಾಗಲಿಂಗೇಶ್ವರ ಸಾಧು ಮಠದ ಪೀಠಾಧಿಪತಿ ಬಸವಾನಂದ ಭಾರತಿ ಸ್ವಾಮಿಗಳು ಜ್ಯೋತಿ ಬೆಳಗಿಸಲಿದ್ದಾರೆ.
ಶಿವಯ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಈ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನಕ್ಕೆ 10 ಸಾವಿರ , ದ್ವಿತೀಯ 7 ಸಾವಿರ, ತೃತೀಯ 5 ಸಾವಿರ ಹಾಗೂ ನಾಲ್ಕನೇ ಸ್ಥಾನಕ್ಕೆ 3 ಸಾವಿರ ಬಹುಮಾನ ನೀಡಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement