ವಾರ್ನರ್ ಅನುಮಾನ
ಮೆಲ್ಬರ್ನ್: ಮುಂದಿನ ವಾರದಿಂದ ಆರಂಭವಾಗಲಿರುವ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಆಡುವುದು ಅನುಮಾನವಾಗಿದೆ. ಕಳೆದ ತಿಂಗಳು ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದ ವಾರ್ನರ್ ಅವರು ಸಂಪೂರ್ಣ ಗುಣಮುಖರಾಗದ ಹಿನ್ನಲೆಯಲ್ಲಿ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನವಾಗಿದೆ. ಈ ವಿಷಯವನ್ನು ತಿಳಿಸಿದ ಕ್ರಿಕೆಟ್ ಆಸ್ಟ್ರೇಲಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಜಾನ್ ಇನ್ವೆರಾರಿಟಿ, ವಾರ್ನರ್ ಅವರ ಹೆಬ್ಬೆರಳು ಕ್ರಮೇಣವಾಗಿ ಚೇತರಿಕೆ ಕಾಣುತ್ತಿದ್ದು, ಇನ್ನು ಸಂಪೂರ್ಣ ಗುಣಮುಖರಾಗಿಲ್ಲ. ಹೀಗಾಗಿ ವಾರ್ನರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಆದರೆ ಮುಂದಿನ ದಿನಗಳಲ್ಲಿ ಅವರ ಚೇತರಿಕೆಯನ್ನು ಗಮನಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.