ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಆಫ್ರಿಕಾ ಸರಣಿಗೆ ಅಫ್ರಿದಿ ಆಯ್ಕೆ

Srinivasa Murthy VN
Updated On : 19 Feb 2013, 10:28 am

ಕರಾಚಿ: ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರಿಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಭಾರತದಲ್ಲಿ ನಡೆದ ಎರಡು ಟಿ20 ಪಂದ್ಯಗಳ ನಂತರ ಏಕದಿನ ಸರಣಿಯಿಂದ ಕೈಬಿಡಲಾಗಿದ್ದ ಅಫ್ರಿದಿ ಅವರಿಗೆ, ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಸರಣಿಯಲ್ಲಿ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ರಾಷ್ಟ್ರೀಯ ಆಯ್ಕೆ ಸಮಿತಿಯ ಹತ್ತಿರದ ಮೂಲಗಳು ತಿಳಿಸಿವೆ. 'ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯಗಳನ್ನಾಡಿಲಿರುವ ಪಾಕಿಸ್ತಾನ, ನಂತರ ಐದು ಏಕದಿನ ಪಂದ್ಯಗಳನ್ನಾಡಲಿದೆ. ಈ ಎರಡೂ ಸರಣಿಯ ತಂಡಗಳಿಗೂ ಅಫ್ರಿದಿ ಅವರನ್ನು ಪರಿಗಣಿಸುವ ಸಾಧ್ಯತೆಗಳಿವ'ಎಂದು ಮೂಲಗಳು ತಿಳಿಸಿವೆ.
ಅಫ್ರಿದಿ ಅವರು ಇದುವರೆಗೂ 349 ಏಕದಿನ ಪಂದ್ಯಗಳನ್ನಾಡಿದ್ದು, ಇತ್ತೀಚೆಗೆ ಆಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನ ಎ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement