ಬಾಂಗ್ಲಾ ಸರಣಿಗೆ ಮಹೇಲ ಅಲಭ್ಯ
ಕೊಲಂಬೊ: ಬೆರಳಿನ ಗಾಯದಿಂದ ಬಳಲುತ್ತಿರುವ ಶ್ರೀಲಂಕಾದ ಹಿರಿಯ ಬ್ಯಾಟ್ಸ್ಮನ್ ಮತ್ತು ಮಾಜಿ ನಾಯಕ ಮಹೇಲ ಜಯವರ್ಧನೆ, ಬರುವ ತಿಂಗಳು ಬಾಂಗ್ಲಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. 'ಭಾನುವಾರ ನಡೆದ ಶ್ರೀಲಂಕಾದ ಪ್ರಥಮ ದರ್ಜೆ ಪಂದ್ಯವೊಂದರಲ್ಲಿ ಜಯವರ್ಧನೆ ತಮ್ಮ ಎಡಗೈನ ಮಧ್ಯ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಸ್ಕ್ಯಾನ್ ಮಾಡಿದ ನಂತರ ಬೆರಳು ಮೂಳೆಗೆ ಬಲವಾದ ಪೆಟ್ಟು ಬಿದ್ದಿರುವುದು ದೃಢಪಟ್ಟಿದೆ' ಎಂದು ಶ್ರೀಲಂಕಾ ಕ್ರಿಕೆಟ್ ಪ್ರಕಟಣೆಯಲ್ಲಿ ತಿಳಿಸಿದೆ. ಹೀಗಾಗಿ ಜಯವರ್ಧನೆ ಅವರಿಗೆ ನಾಲ್ಕರಿಂದ ಆರು ವಾರಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.