'ಸ್ಪಿನ್ ಪರಿಣಾಮ ಬೀರುವ ಖಾತ್ರಿ ಇಲ್ಲ'
ಮೆಲ್ಬರ್ನ್: ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 5 ಸ್ಪಿನ್ನರ್‌ಗಳನ್ನು ಬಳಸಿಕೊಳ್ಳಬಹುದು. ಆದರೆ, ಫೆಬ್ರವರಿ 22ರಿಂದ ಆರಂಭವಾಗಲಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೇಗದ ಬೌಲರ್‌ಗಳು ಹೆಚ್ಚು ಪರಿಣಾಮಕಾರಿಯಾಗುತ್ತಾರೆ ಎಂದು ಮಾಜಿ ಕೋಚ್ ಜಾನ್ ಬಚಾನನ್ ಅಭಿಪ್ರಾಯಪಟ್ಟಿದ್ದಾರೆ. 'ಭಾರತೀಯರು ಸ್ಪಿನ್ನರ್‌ಗಳನ್ನು ಹೆಚ್ಚು ಬಳಸುತ್ತಾರೆ. ಆದರೆ, ಸರಣಿಯಲ್ಲಿ ಸ್ಪಿನ್ನರ್‌ಗಳು ಹೆಚ್ಚು ಪರಿಣಾಮ ಬೀರುತ್ತಾರೆ ಎಂಬ ಬಗ್ಗೆ ಖಾತ್ರಿ ಇಲ್ಲ' ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್‌ಗೆ ಬಚಾನನ್ ತಿಳಿಸಿದ್ದಾರೆ.