ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಸಚಿನ್ ನಿವೃತ್ತಿಯಾದರೆ ಟೆಸ್ಟ್ ನಿರ್ಜೀವ: ಅರ್ಜುನ್

Parashurama
Updated On : 22 Feb 2013, 11:44 am

ಬೆಂಗಳೂರು: ಶ್ರೀಲಂಕಾದ ಮಾಜಿ ನಾಯಕ ಅರ್ಜುನ್ ರಣತುಂಗಾ ಭಾರತದ ಸಚಿನ್ ತೆಂಡೂಲ್ಕರ್ ಅವರ ಗುಣಗಾನ ಮಾಡಿದ್ದಾರೆ. ಒಂದುವೇಳೆ ಸಚಿನ್ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಪಡೆದರೆ ಟೆಸ್ಟ್ ಕ್ರಿಕೆಟ್ ಅಂತ್ಯವಾಗಲಿದೆ ಎಂದು ತಿಳಿಸಿದ್ದಾರೆ.ಸಚಿನ್‌ರಂತಹ ಆಟಗಾರರು ಟೆಸ್ಟ್ ಕ್ರಿಕೆಟ್ ಆಡದಿದ್ದರೆ, ಟೆಸ್ಟ್ ಕ್ರಿಕೆಟ್ ಬೇಗನೆ ಅಂತ್ಯವಾಗಲಿದೆ. ನಾನು ತೆಂಡೂಲ್ಕರ್ ಮತ್ತಷ್ಟು ದಿನ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರಿಯಲಿ ಎಂದು ಪ್ರಾರ್ಥಿಸುತ್ತೇನೆ. ಅವರು ಏಕದಿನಕ್ಕೆ ನಿವೃತ್ತಿ ಘೋಷಿಸಿ, ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರಿದಿರುವುದು ನನಗೆ ಸಂತಸ ತಂದಿದೆ. ನನ್ನ ಪ್ರಕಾರ ಟೆಸ್ಟ್ ಕ್ರಿಕೆಟ್ ಶಿಕ್ಷಣವಿದ್ದಂತೆ, ಹಾಗೂ ಏಕದಿನ ಕ್ರಿಕೆಟ್ ಮನರಂಜನೆ ಇದ್ದಂತೆ ಎಂದು ರಣತುಂಗಾ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement