ದ್ವಿತೀಯ ಟೆಸ್ಟ್: ಭದ್ರತಾ ವ್ಯವಸ್ಥೆ ಪರಿಶೀಲನೆ
ಹೈದರಾಬಾದ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಮಾ. 2ರಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಸೋಮವಾರ ಬಿಸಿಸಿಐ ಅಧಿಕಾರಿಗಳು, ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ (ಸಿಎ)ಯ ಅಧಿಕಾರಿಗಳು ಪಂದ್ಯ ನಡೆಯಲಿರುವ ರಾಜೀವ್ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಭೇಟಿ ನೀಡಿದರು.
ನಗರದಲ್ಲಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ, ಈ ಭೇಟಿ ನೀಡಿದ್ದ ಅಧಿಕಾರಿಗಳು, ಕ್ರೀಡಾಂಗಣದಲ್ಲಿ ಕೈಗೊಳ್ಳಲಾಗಿರುವ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ, ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಹಾಗೂ ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್ಸಿಎ)ಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಎಚ್ಸಿಎ ಅಧಿಕಾರಿ ಎಂ.ವಿ. ಶ್ರೀಧರ್, 'ಪಂದ್ಯದ ವೇಳೆ ಭದ್ರತೆಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಎಲ್ಲೂ ಯಾವುದೇ ರೀತಿಯ ಹೊಂದಾಣಿಕೆಯೇ ಇಲ್ಲ. ಭದ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಸೂಚಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಅಲ್ಲದೇ, ಆಸ್ಟ್ರೇಲಿಯಾ ಆಟಗಾರರು ಭದ್ರತೆಗೆ ಸಂಬಂಧಿಸಿದಂತೆ ಯಾವುದೇ ವಿಶೇಷ ಬೇಡಿಕೆ ಇಟ್ಟಲ್ಲಿ ಅದನ್ನು ಪೂರೈಸಲಾಗುವುದು ಎಂದೂ ಹೇಳಿದರು.
ನಗರದಲ್ಲಿ, ಗುರುವಾರ ಎರಡು ಬಾಂಬ್ ಸ್ಫೋಟಗಳು ಸಂಭವಿದ್ದವು. ಇದರಲ್ಲಿ 12 ಜನ ಸಾವಿಗೀಡಾಗಿದ್ದರು. ಅಲ್ಲದೇ, 84 ಜನ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ, ಹೈದರಾಬಾದ್ನಲ್ಲಿ ನಡೆಯುವ ಪಂದ್ಯದಲ್ಲಿ ತಾನು ಆಡುವುದಿಲ್ಲವೆಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಹೇಳಿತ್ತು.