'ಸವಾಲಿನ ಬಗ್ಗೆ ಚಿಂತಿಸುವುದಿಲ್ಲ'
ನವದೆಹಲಿ: ಮುಂಬರುವ ಆಲ್ ಇಂಗ್ಲೆಂಡ್ ಚಾಂಪಿಯನ್ಷಿಪ್ನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿರುವ ಭಾರತದ ಬ್ಯಾಡ್ಮಿಂಟನ್ ಆಟಗಾರ ಪಿ.ಕಶ್ಯಪ್, ಪಂದ್ಯಾವಳಿಯಲ್ಲಿ ಎದುರಾಗುವ ಸವಾಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ ಎಂದು ತಿಳಿಸಿದ್ದಾರೆ. ವಿಶ್ವದ 11ನೇ ರ್ಯಾಂಕಿಂಗ್ ಪಡೆದಿರುವ ಕಶ್ಯಪ್ ಈ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚೈನೀಸ್ ಥೇಪೈನ ಜೆನ್ ಹೌ ಸೂ ವಿರುದ್ಧ ತಮ್ಮ ಮೊದಲ ಪಂದ್ಯವನ್ನಾಡಲಿದ್ದು, ಎರಡನೇ ಸುತ್ತಿನಲ್ಲಿ 7ನೇ ಶ್ರೇಯಾಂಕಿತ ಜಪಾನ್ನ ಕೆನಿಚಿ ಟಾಗೊ ವಿರುದ್ಧ ಸೆಣೆಸುವ ಸಾಧ್ಯತೆಗಳಿವೆ. ಪಂದ್ಯಾವಳಿಯಲ್ಲಿ ನನಗೆ ಉತ್ತಮ ಸವಾಲುಗಳು ಎದುರಾಗಲಿದೆ. ಒಂದುವೇಳೆ ನಾನು ಈ ಪಂದ್ಯಾವಳಿಯ ಆರಂಭಿಕ ಸುತ್ತುಗಳಲ್ಲಿ ಯಶಸ್ವಿಯಾದರೆ ಪಂದ್ಯಾವಳಿಯಲ್ಲಿ ಉತ್ತಮ ಹಂತದವರೆಗೂ ತಲುಪುವ ವಿಶ್ವಾಸವಿದೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.