ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಹೈದರಾಬಾದ್‌ಗೆ ತಂಡ ಆಗಮನ

Parashurama
Updated On : 27 Feb 2013, 10:47 am

ಹೈದರಾಬಾದ್: ಕಳೆದ ವಾರ ಇಲ್ಲಿ ನಡೆದ ಅವಳಿ ಬಾಂಬ್ ಸ್ಫೋಟದ ಹಿನ್ನಲೆಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಿಗಿ ಭದ್ರತೆಯ ನಡುವೆ ಇಲ್ಲಿಗೆ ಆಗಮಿಸಿದೆ.
ಮಾ.2 ರಂದು ಎರಡನೇ ಟೆಸ್ಟ್ ಪಂದ್ಯ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತ ತಂಡ ಚೆನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಏಂಟು ವಿಕೆಟ್‌ಗಳ ಭರ್ಜರಿ ಜಯ ದಾಖಲಿಸುವುದರೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಬುಧವಾರ ನಗರಕ್ಕೆ ಆಗಮಿಸಿರುವ ಎರಡೂ ತಂಡಗಳು, ಗುರುವಾರದಿಂದ ತಮ್ಮ ಅಭ್ಯಾಸವನ್ನು ಆರಂಭಿಸಲಿದೆ. ಕಳೆದ ವಾರದ ಬಾಂಬ್ ಸ್ಫೋಟದ ಹಿನ್ನಲೆಯಲ್ಲಿ ಆಟಗಾರರ ಜತೆಗೆ ಕ್ರೀಡಾಂಗಣಕ್ಕೂ ಬಿಗಿಯಾದ ಭದ್ರತೆ ಒದಗಿಸಲಾಗಿದೆ.
ಬಿಸಿಸಿಐ ಹಾಗೂ ಕ್ರಿಕೆಟ್ ಆಸ್ಟ್ರೇಲಿಯಾದ ಅಧಿಕಾರಿಗಳು ಈಗಾಗಲೆ ಇಲ್ಲಿಗೆ ಆಗಮಿಸಿ ಆಯೋಜನೆಯ ಬಗ್ಗೆ ಪರಿಶೀಲನೆ ನಡೆಸಿದ್ದು, ವಿಶೇಷವಾಗಿ ಭದ್ರತೆಯ ಬಗ್ಗೆ ಹೆಚ್ಚು ಗಮನ ಹರಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement