'ಬೌಲಿಂಗ್‌ಗೆ ಅವಕಾಶ ಸಿಗಲಿಲ್ಲ'
ಹೈದರಾಬಾದ್: ಭಾರತ ವಿರುದ್ಧ ಮೊದಲ ಟೆಸ್ಟ್ ಪಂದ್ಯಗದಲ್ಲಿ ಮುಂಖಭಂಗ ಅನುಭವಿಸಿದ ನಂತರ ಆಸೀಸ್‌ನ ಆಲ್ರೌಂಡರ್ ಶೇನ್ ವ್ಯಾಟ್ಸನ್ ಮತ್ತೇ ಬೌಲಿಂಗ್ ಮಾಡಲು ನಿರ್ಧರಿಸಿದ್ದು, ಮೊದಲ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದ ನನಗೆ ಬೌಲಿಂಗ್ ಮಾಡಲು ಅವಕಾಶ ಸಿಗಲಿಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚಿನ ಕೆಲ ತಿಂಗಳುಗಳಿಂದ ಪದೇ ಪದೇ ಗಾಯದ ಸಮಸ್ಯೆಗೆ ಒಳಗಾಗುತ್ತಿದ್ದ ಹಿನ್ನಲೆಯಲ್ಲಿ ಭಾರತ ವಿರುದ್ಧದ ಸರಣಿಯಲ್ಲಿ ಕೇವಲ ಬ್ಯಾಟ್ಸ್‌ಮನ್ ಆಗಿ ಆಡಲು ವ್ಯಾಟ್ಸನ್ ನಿರ್ಧರಿಸಿದ್ದರು. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳನ್ನು ನಿಯತ್ರಿಸುವಲ್ಲಿ ಆಸೀಸ್ ಬೌಲರ್‌ಗಳು ವಿಫಲವಾದ ಹಿನ್ನಲೆಯಲ್ಲಿ ವ್ಯಾಟ್ಸನ್ ಮತ್ತೆ ಬೌಲಿಂಗ್ ಮಾಡಲು ತೀರ್ಮಾನಿಸಿದ್ದಾರೆ.
'ಸ್ನಾಯು ಸೆಳೆತದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಸ್ವಲ್ಪ ದಿನಗಳ ಕಾಲ ಬೌಲಿಂಗ್ ಮಾಡದಿರಲು ನಿರ್ಧರಿಸಿದ್ದೆ. ಆದರೆ ಮೊದಲ ಪಂದ್ಯದಲ್ಲಿ ನಾನು ಬೌಲಿಂಗ್ ಮಾಡಬೇಕಿತ್ತು. ಒಂದುವೇಳೆ ನಾನು ಬೌಲಿಂಗ್ ಮಾಡದಿರಲು ನಿರ್ಧರಿಸದಿದ್ದರೆ, ಮೊದಲ ಪಂದ್ಯದಲ್ಲಿ ಬೌಲಿಂಗ್ ಮಾಡಿ ಮಹತ್ವದ ಸಂದರ್ಭದಲ್ಲಿ ತಂಡಕ್ಕೆ ನೆರವಾಗಬಹುದಿತ್ತು ಎಂದು ವ್ಯಾಟ್ಸನ್' ತಿಳಿಸಿದ್ದಾರೆ.