ಕ್ರೀಡೆ

5ನೇ ಏಕದಿನ ಪಂದ್ಯ: ಇಂಗ್ಲೆಂಡ್ ಗೆಲುವಿಗೆ 227 ರನ್ ಗುರಿ

ಪ್ರವಾಸಿ ಇಂಗ್ಲೆಂಡ್ ವಿರುದ್ಧ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಅತಿಥೇಯ ಭಾರತ ತಂಡ 227ರನ್ ಗಳ ಸಾಧಾರಣ ಗುರಿ ನೀಡಿದೆ.

ಧರ್ಮಶಾಲಾ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಅತಿಥೇಯ ಭಾರತ ತಂಡ 227ರನ್ ಗಳ ಸಾಧಾರಣ ಗುರಿ ನೀಡಿದೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡ ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ನಡೆಸಲು ಆಹ್ವಾನ ನೀಡಿತು. ಬ್ಯಾಟಿಂಗ್ ಗೆ ಇಳಿದ ಭಾರತ ತಂಡದ ಆರಂಭ ಉತ್ತಮಮವಾಗಿರಲಿಲ್ಲ. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 4, ವಿರಾಟ್ ಕೊಹ್ಲಿ 0, ಯುವರಾಜ್ ಸಿಂಗ್ 0ಕ್ಕೆ ಔಟಾದರು. ನಂತರ ಬಂದ ಸುರೇಶ್ ರೈನಾ ಮತ್ತು ಗಂಭೀರ್ ಜೋಡಿ ಇಂಗ್ಲೆಂಡ್ ಬೌಲರ್ ಗಳ ಆರ್ಭಟಕ್ಕೆ ಕೊಂಚ ತಡೆವೊಡ್ಡಿತು. ಈ ಹಂತದಲ್ಲಿ ಬಿರುಸಿನ ಆಟವಾಡಲು ಮುಂದಾದ ಗಂಭೀರ್, ಟ್ರೆಡ್ ವೆಲ್ ಬೌಲಿಂಗ್ ನಲ್ಲಿ ಇಯಾನ್ ಬೆಲ್ ಗೆ ಕ್ಯಾಚ್ ನೀಡಿದರು. ಈ ಹಂತದಲ್ಲಿ ಗಂಭೀರ್ 24 ರನ್ ಗಳಿಸಿದ್ದರು.

ಧೋನಿ ಜೊತೆಗೂಡಿದ ರೈನಾ ಆಕರ್ಷಕ 83 ರನ್ಗಳಿಸಿದರು. ನಾಯಕ ಧೋನಿ 15, ರವೀಂದ್ರ ಜಡೇಜಾ 39, ಆರ್ ಅಶ್ವಿನ್ 19, ಭುವನೇಶ್ವರ್ 31 ರನ್ ಗಳಿಸಿದ್ದರು.

ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ 2 ವಿಕೆಟ್ ಕಳೆದುಕೊಂಡು 107 ರನ್ಗಳಿಸಿದೆ. ಅರ್ಧಶತಕ ಪೂರೈಸಿರುವ ಇಯಾನ್ ಬೆಲ್ ಮತ್ತು 20 ರನ್ ಗಳಿಸಿರುವ ಜೋ ರೂಟ್ ಬ್ಯಾಟಿಂಗ್ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!