ಕ್ರೀಡೆ

ಸಂತೋಷ, ಬೇಸರ ಒಟ್ಟೊಟ್ಟಿಗೆ: ಮೇರಿ

ನವದೆಹಲಿ: 'ಪ್ರಶಸ್ತಿ ಲಭಿಸಿದ್ದಕ್ಕೆ ಸಂತಸವಾಗಿದೆ. ಆದರೆ, ಭಾರತೀಯ ಬಾಕ್ಸಿಂಗ್ ಕ್ಷೇತ್ರದ ಇತ್ತೀಚೆಗಿನ ಬೆಳವಣಿಗೆಗಳು ಬೇಸರ ತರಿಸಿವೆ. ಆದ್ದರಿಂದ, ಒಂದೆಡೆ ಸಂತೋಷ, ಮತ್ತೊಂದೆಡೆ ಬೇಸರ- ಎರಡೂ ಆಗುತ್ತಿವೆ...' ಇವು  ಈ ಬಾರಿಯ ಪದ್ಮಭೂಷಣ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿರುವ ಬಾಕ್ಸರ್ ಮೇರಿ ಕೋಂ ಅವರ ನುಡಿಗಳು. ಪ್ರಶಸ್ತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಮೇರಿ ಕೊಂ ಈ ರೀತಿ ಪ್ರತಿಕ್ರಯಿಸಿದ್ದಾರೆ.  ಇತ್ತೀಚೆಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ ವತಿಯಿಂದ ಭಾರತೀಯ ಬಾಕ್ಸಿಂಗ್ ಸಂಸ್ಥೆ ಅಮಾನತುಗೊಂಡಿರುವ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದರು.
'ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಲಭಿಸಿದ್ದಕ್ಕೆ ನನಗೆ ಆಶ್ಚರ್ಯ ಹಾಗೂ ಸಂತಸವಾಗಿದೆ. ಆದರೆ, ಇದೇ ಸಮಯದಲ್ಲಿ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯ ಅವಕೃಪೆಗೆ ಭಾರತೀಯ ಬಾಕ್ಸಿಂಗ್ ಸಂಸ್ಥೆ ಒಳಗಾಗಿರುವುದು ಬೇಸರ ತರಿಸಿದೆ. ಮುಂದಿನ ದಿನಗಳಲ್ಲಿ ಭಾರತೀಯ ಬಾಕ್ಸರ್‌ಗಳಿಗೆ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಲು ತೊಂದರೆಯಾಗುತ್ತದೆ' ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!