ಭುವನೇಶ್ವರ: ಮಹಿಳಾ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನದ ತಂಡ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ನಗರದಲ್ಲಿ ಭಾನುವಾರ ಉತ್ಕಲ ಭಾರತ ಸಂಘಟನೆಯ 10 ಜನರನ್ನು ಬಂಧಿಸಲಾಗಿದೆ.
ಪಂದ್ಯಾವಳಿಯಲ್ಲಿ ಪಾಕಿಸ್ತಾನ ತಂಡ ಭಾಗವಹಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಂಸದ ಖಾರ್ವೆಲ್ ಸ್ವೈನ್ ಅವರನ್ನು ಸಹ ಬಂಧಿಸಲಾಗಿದೆ.
ಇಲ್ಲಿನ ಬಿಜು ಪಟ್ನಾಯಕ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ವೈನ್ ಮತ್ತು ಇತರ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. 'ಪಾಕಿಸ್ತಾನ ತಂಡ ಆಗಮಿಸುವವರೆಗೂ ಬಂಧಿತರನ್ನು ಬಿಡುಗಡೆಗೊಳಿಸಲಾಗುವುದಿಲ್ಲ' ಎಂದು ಪೊಲೀಸರು ಹೇಳಿದ್ದಾರೆ.