ಕ್ರೀಡೆ

ಆಸೀಸ್ ವಿರುದ್ಧ ಕ್ಲೀನ್‌ಸ್ವೀಪ್: ಹರ್ಭಜನ್ ಸಿಂಗ್ ವಿಶ್ವಾಸ

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಕ್ಲೀನ್ ಸ್ವೀಪ್ ಜಯ ಸಾಧಿಸಲಿದೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಫೆಬ್ರವರಿ 22ರಿಂದ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಲಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಕ್ಲೀನ್ ಸ್ವೀಪ್ ಜಯ ಸಾಧಿಸಲಿದೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
'ಆಸ್ಟ್ರೇಲಿಯಾ ತಂಡ ಯುವಕರಿಂದ ಕೂಡಿದ್ದಾಗಿದೆ. ತವರಿನ ಅಂಗಣದಲ್ಲೇ ಸ್ಥಿರ ಪ್ರದರ್ಶನ ನೀಡಲು ಆಸ್ಟ್ರೇಲಿಯಾಕ್ಕೆ ಸಾಧ್ಯವಾಗುತ್ತಿಲ್ಲ. ಭಾರತದಲ್ಲಿ ನಡೆಯಲಿರುವ ಸರಣಿಯಲ್ಲಿ ಮೈಕೆಲ್ ಕ್ಲಾರ್ಕ್ ನಾಯಕತ್ವದ ತಂಡವನ್ನು ನಾವು ಸುಲಭವಾಗಿ 4-0 ಅಂತರದಿಂದ ಮಣಿಸಲಿದ್ದೇವೆ' ಎಂದು ಹರ್ಭಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
'ರಣಜಿ ಟ್ರೋಫಿಯಲ್ಲಿ ಬೌಲಿಂಗ್ ಮಾಡಿದಾಗ ನನ್ನ ಬೌಲಂಗ್ ಚೇತರಿಸಿಕೊಂಡಿರುವ ಬಗ್ಗೆ ವಿಶ್ವಾಸ ಮೂಡಿದೆ. ಅಭ್ಯಾಸ ಪಂದ್ಯದಲ್ಲಿ ನಾನು ಸಾಧ್ಯವಾದಷ್ಟು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲಿದ್ದೇನೆ. ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಆಯ್ಕೆಯಾಗುವ ವಿಶ್ವಾಸ ಹೊಂದಿದ್ದೇನೆ' ಎಂದಿದ್ದಾರೆ ಹರ್ಭಜನ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ