ಕ್ರೀಡೆ

ಬ್ಯಾಡ್ಮಿಂಟನ್ ರ್ಯಾಂಕಿಂಗ್: ಎರಡನೇ ಸ್ಥಾನ ಉಳಿಸಿಕೊಂಡ ಸೈನಾ ನೆಹ್ವಾಲ್

ನವದೆಹಲಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಮಹಿಳೆಯರ ಸಿಂಗಲ್ಸ್ ರ್ಯಾಂಕಿಂಗ್‌ನಲ್ಲಿ 2ನೇ ಸ್ಥಾನ ಉಳಿಸಿಕೊಂಡಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಗುರುವಾರ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಭಾರತದ ಸೈನಾ ನೆಹ್ವನಾಲ್ 80461.7444 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ. ಒಲಿಂಪಿಕ್ಸ್ ಚಾಂಪಿಯನ್ ಚೀನಾದ ಲೀ ಕ್ಸೂರಿ ಅವರು 94626.7153 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ವಿ. ಸಿಂಧು ಅವರು ಮಹಿಳೆಯರ ಸಿಂಗಲ್ಸ್‌ನಲ್ಲಿ ಯಥಾ 16ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಸೈನಾ ನೆಹ್ವಾಲ್ ನಂತರ ಭಾರತಬ್ಯಾಡ್ಮಿಂಟನ್‌ನಲ್ಲಿ ಸಿಂಧು ಉತ್ತಮಪ್ರದರ್ಶನ ನೀಡತೊಡಗಿದ್ದು, ಭವಿಷ್ಯದ ಭರವಸೆಯ ಆಟಗಾರ್ತಿ ಎಂದೇ ಗುರುತಿಸಿಕೊಂಡಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪರುಪಲ್ಲಿ ಕಶ್ಯಪ್  ಅವರು ತಮ್ಮ ವೃತ್ತಿಶ್ರೇಷ್ಠ ರ್ಯಾಂಕಿಂಗ್‌ಒಂಬತ್ತನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪುರುಷ ವಿಭಾಗದಲ್ಲಿ ಮಲೇಷ್ಯಾದ ಲೀ ಚಾಂಗ್ ವೀ ಅವರು ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!