ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಆಲ್ ಇಂಗ್ಲೆಂಡ್ ಚಾಂಪಿಯನ್‌ಷಿಪ್‌ಗೆ ಜ್ವಾಲಾ ಗುಟ್ಟಾ

Parashurama
Updated On : 2 Mar 2013, 11:20 am

ನವದೆಹಲಿ: ಕಠಿಣ ಹಂತದಲ್ಲಿ ನಾನು ವೃತ್ತಿಗೆ ಮರಳುತ್ತಿದ್ದೇನೆ ಎಂದು ಆಲ್ ಇಂಗ್ಲೆಂಡ್ ಚಾಂಪಿಯನ್‌ಷಿಪ್‌ನಲ್ಲಿ ಬಾಗವಹಿಸಲಿರುವ ಭಾರತದ ಡಬಲ್ಸ್ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಅವರು ಶನಿವಾರ ಹೇಳಿದ್ದಾರೆ. ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟದ ನಂತರ ಜ್ವಾಲಾ ಏಳು ತಿಂಗಳ ಕಾಲ ವಿಶ್ರಾಂತಿ ಪಡೆದಿದ್ದರು. ಈಗ ಆಲ್ ಇಂಗ್ಲೆಂಡ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲು ಕಳೆದ ಎರಡು ತಿಂಗಳಿಂದ ಅಭ್ಯಾಸ ನಡೆಸುತ್ತಿದ್ದಾರೆ. ಆಲ್ ಇಂಗ್ಲೆಂಡ್ ಚಾಂಪಿಯನ್‌ಷಿಪ್‌ನ ಮಹಿಳೆಯರ ಡಬಲ್ಸ್‌ನಲ್ಲಿ 20 ವರ್ಷದ ಪ್ರಜಕ್ತಾ ಸಾವಂತ್ ಅವರೊಂದಿಗೆ, ಮತ್ತು ಮಿಶ್ರ ಡಬಲ್ಸ್‌ನಲ್ಲಿ ವಿ. ಡಿಜು ಅವರೊಂದಿಗೆ ಜ್ವಾಲಾ ಸ್ಪರ್ಧೆಗಳಿಯಲಿದ್ದಾರೆ. 'ದೀರ್ಘ ಕಾಲದ ವಿಶ್ರಾಂತಿಯ ನಂತರ ಸ್ಪರ್ಧೆಗೆ ಮರಳುತ್ತಿರುವುದು ಕಠಿಣ ಸವಾಲಾಗಿದೆ. ಹೀಗಾಗಿ ಪಂದ್ಯಾವಳಿಯಲ್ಲಿ ಹೆಚ್ಚಿನ ನಿರೀಕ್ಷೆಯನ್ನು ಹೊಂದಿಲ್ಲ. ಸ್ಪರ್ಧೆಯನ್ನು ಸುಲಭವಾಗಿ ಪರಿಗಣಿಸಿದ್ದೇನೆ. ಆಲ್ ಇಂಗ್ಲೆಂಡ್ ಚಾಪಿಯನ್‌ಷಿಪ್‌ನ ಮಿಶ್ರ ಡಬಲ್ಸ್ ವಿಭಾಗದಲ್ಲಿ ಎದುರಾಳಿಗಳು ಅಷ್ಟೊಂದು ಕಠಿಣವಾಗಿಲ್ಲ' ಎಂದು ಜ್ವಾಲಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments