23 ಆಟಗಾರರನ್ನು ಕೈಬಿಟ್ಟ ಶ್ರೀಲಂಕಾ ಕ್ರಿಕೆಟ್ ಮಂಡಳಿ
ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ಮಂಡಳಿ ಹೊಸ ಒಪ್ಪಂದ ನಿಯಮಾವಳಿಗಳನ್ನು ಜಾರಿಗೆ ತಂದಿದ್ದು, ಈ ಹೊಸ ನಿಯಮಾವಳಿಗೆ ಒಪ್ಪದ 23 ಪ್ರಮುಖ ಆಟಗಾರರನ್ನು ಅಂತಾರಾಷ್ಟ್ರೀಯ ತಂಡದಿಂದ ಕೈಬಿಟ್ಟಿದೆ. ಭಾನುವಾರ ಬೆಳಗ್ಗೆ 9 ಗಂಟೆಯವರೆಗೆ ಹೊಸ ಒಪ್ಪಂದಕ್ಕೆ ಅಂತಿಮ ಗಡುವಾಗಿತ್ತು ಆದರೆ ಶ್ರೀಲಂಕಾ ತಂಡದ ಯಾವುದೇ ಆಟಗಾರ ಈ ಹೊಸ ಒಪ್ಪಂದ ಪ್ರತಿಕ್ರಿಯೆ ನೀಡದ ಕಾರಣ ಈ ಎಲ್ಲಾ ಆಟಗಾರರನ್ನು ತಂಡದಿಂದ ಹೊರಗಿಡಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ. ಹೊಸ ಒಪ್ಪಂದದಲ್ಲಿ ಐಸಿಸಿ ಆಯೋಜಿತ ಪಂದ್ಯಾವಳಿಯಿಂದ ಬರುವ ಸಂಭಾವನೆಯಲ್ಲಿ ಶೇ.25ರಷ್ಟು ಹಾಗೂ ಐಪಿಎಲ್ ಹಾಗೂ ವಿದೇಶಿ ಪಂದ್ಯಾವಳಿಯ ವೇಳೆಯಲ್ಲಿನ ಸಂಭಾವನೆಗೂ ಕೂಡ ಶ್ರೀಲಂಕಾ ಕ್ರಿಕೆಟ್ ಮಂಡಳಿ ಕತ್ತರಿ ಹಾಕಲು ಮುಂದಾಗಿದೆ. ಈ ನಿರ್ಧಾರಕ್ಕೆ ಎಲ್ಲಾ ಆಟಗಾರರು ಅಸಮಾದಾನ ವ್ಯಕ್ತಪಡಿಸಿದ್ದು, ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದ್ದಾರೆ. ಒಟ್ಟಾರೆಯಾಗಿ 60 ಆಟಗಾರರು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಅದರಲ್ಲಿ 23 ಪ್ರಮುಖ ಆಟಗಾರರು ಸೇರಿದ್ದಾರೆ. ಆಟಗಾರರು ಹೊಸ ಒಪ್ಪಂದಕ್ಕೆ ಮುಂದಾಗದ ಕಾರಣ 23 ಪ್ರಮುಖ ಆಟಗಾರರನ್ನು ಮುಂಬರುವ ಬಾಂಗ್ಲಾದೇಶ ಸರಣಿ ಸೇರಿದಂತೆ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಗಣನೆಗೆ ತೆಗೆದುಕೊಳ್ಳಬಾರದು ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಆಯ್ಕೆ ಸಮಿತಿಗೆ ಸೂಚನೆ ನೀಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.