ಎರಡನೇ ದಿನ ಶ್ರದ್ಧಾಂಜಲಿ
ಹೈದರಾಬಾದ್: ಹೈದರಾಬಾದ್ನಲ್ಲಿ ಇತ್ತೀಚೆಗೆ ಸಂಭವಿಸಿದ ಅವಳಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮರೆತಿದ್ದ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (ಎಚ್ಸಿಎ), ಎರಡನೇ ದಿನ ತಮ್ಮ ತಪ್ಪನ್ನು ಅರಿತುಕೊಂಡು ಶ್ರದ್ಧಾಂಜಲಿ ಅರ್ಪಿಸಿತು. ಎರಡನೇ ದಿನದಾಟ ಆರಂಭಕ್ಕೂ ಮುನ್ನ, ಎರಡೂ ತಂಡದ ಆಟಗಾರರು 2 ನಿಮಿಷಗಳ ಮೌನಾಚರಣೆ ಮಾಡುವ ಮೂಲಕ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರಿಗೆ ಅಂತಿಮ ನಮನ ಸಲ್ಲಿಸಿದರು. ನಾವು ಪಂದ್ಯದ ಭದ್ರತೆ ಬಗ್ಗೆ ಹೆಚ್ಚು ಗಮನ ವಹಿಸಿದ್ದೇವು ಜತೆಗೆ ನಮ್ಮಲ್ಲಿ ಸಂಘಟನೆಯ ಕೊರತೆಯಿಂದ ಈ ಘಟನೆ ಸಂಭವಿಸಿತು ಎಂದು ಎಚ್ಸಿಎ ಅಧಿಕಾರಿ ಡಾ.ಎಂ.ವಿ.ಶ್ರೀಧರ್ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.