ಪಿಸಿಬಿ ಬೆಂಬಲಕ್ಕೆ ರಣತುಂಗಾ
ಲಾಹೋರ್: ಪಾಕಿಸ್ತಾನ ವಿಶ್ವ ಕ್ರಿಕೆಟ್ನ ಉತ್ತಮ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿ ಮತ್ತೆ ಆಂತಾರಾಷ್ಟ್ರೀಯ ಕ್ರಿಕೆಟ್ ನಡೆಸಲು ನನ್ನಿಂದ ಸಾಧ್ಯವಾಗುವ ಎಲ್ಲಾ ಸಹಾಯವನ್ನು ನೀಡಲು ಸಿದ್ಧ ಎಂದು ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಅರ್ಜುನ ರಣತುಂಗಾ ತಿಳಿಸಿದ್ದಾರೆ. 2009ರಲ್ಲಿ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ಶ್ರೀಲಂಕಾ ತಂಡದ ಮೇಲೆ ಉಗ್ರರ ದಾಳಿ ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೆ ಪಾಕಿಸ್ತಾನಕ್ಕೆ ತೆರಳಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಲು ವಿಶ್ವದ ಎಲ್ಲಾ ಕ್ರಿಕೆಟ್ ಆಡುವ ರಾಷ್ಟ್ರಗಳು ಹಿಂದೇಟು ಹಾಕಿವೆ. ಇದರಿಂದಾಗಿ, ಅಲ್ಲಿ ಕ್ರಿಕೆಟ್ ಅಸ್ಥಿತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.