ಪ್ರಾಯೋಜಕತ್ವಕ್ಕೆ ಪಂಕಜ್ ಮನವಿ
ನವದೆಹಲಿ: ವಿಶ್ವ ಬಿಲಿಯರ್ಡ್ಸ್ನಲ್ಲಿ ಹಂತ ಹಂತವಾಗಿ ಯಶಸ್ಸಿನ ಉತ್ತುಂಗಕ್ಕೇರುತ್ತಿರುವ ಭಾರತದ ಪಂಕಜ್ ಅಡ್ವಾಣಿ ತಮ್ಮ ಯಶಸ್ಸಿನ ಹಾದಿಯನ್ನು ಮುಂದುವರೆಸಿ, ತಮ್ಮ ಕನಸ್ಸನ್ನು ಈಡೇರಿಸಲು ಖಾಸಗಿ ಪ್ರಾಯೋಜಕತ್ವದ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಮೊದಲ ಬಾರಿಗೆ ದುಬಾರಿ ಹಾಗೂ ಉನ್ನತ ಮಟ್ಟದ ಪ್ರೊ ಸರ್ಕಿಟ್ನಲ್ಲಿ ಭಾಗವಹಿಸಿ ಯಶಸ್ಸುಗಳಿಸಿದ ನಂತರ ಮತ್ತೇ ಲಂಡನ್ಗೆ ತೆರಳಲು ಪಂಕಜ್ ಸಿದ್ಧರಾಗಿದ್ದಾರೆ.
ಇಂಗ್ಲೆಂಡ್ಗೆ ತೆರಳಿ ಅಲ್ಲಿನ ಪ್ರೊ ಸರ್ಕಿಟ್ನಲ್ಲಿ ಭಾಗವಹಿಸಲು ಸಾಕಷ್ಟು ಹಣ ಖರ್ಚಾಗುತ್ತದೆ. ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಹೆಚ್ಚು ಖರ್ಚು ಎದುರಾಗುವ ಹಿನ್ನಲೆಯಲ್ಲಿ ಖಾಸಗಿ ಪ್ರಾಯೋಜಕತ್ವಕ್ಕಾಗಿ ಮಾತುಕತೆ ನಡೆಸುತ್ತಿದ್ದೇನೆ ಎಂದು ಪಂಕಜ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.