ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ಬೈ ಹೇಳಿದ ಸಮರವೀರ
ಕೊಲಂಬೋ: ಶ್ರೀಲಂಕಾ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ತಿಲನ್ ಸಮರವೀರ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸಿದರು.
ಮಾ. 8ರಿಂದ ಆರಂಭಗೊಳ್ಳಲಿರುವ ಶ್ರೀಲಂಕಾ- ಬಾಂಗ್ಲಾದೇಶ ಸರಣಿಗಾಗಿ ಆಯ್ಕೆಗೊಂಡ ಶ್ರೀಲಂಕಾ ತಂಡದಿಂದ ತಮ್ಮನ್ನು ಹೊರಗಿಟ್ಟಿದ್ದರಿಂದ, ಬೇಸತ್ತು ತಾವು ನಿವೃತ್ತಿಯ ನಿರ್ಧಾರ ಕೈಗೊಂಡಿದ್ದಾಗಿ ಅವರು ತಿಳಿಸಿದ್ದಾರೆ. 36 ವರ್ಷದ ಸಮರವೀರ, ಇದುವರೆಗಿನ ತಮ್ಮ ವೃತ್ತಿಜೀವನದಲ್ಲಿ ಒಟ್ಟು 81 ಟೆಸ್ಟ್ ಹಾಗೂ 53 ಏಕದಿನ ಪಂದ್ಯಗಳನ್ನಾಡಿದ್ದಾರೆ.