'ಆಸೀಸ್ಗಿಂತ ಇಂಗ್ಲೆಂಡ್ ಬಲಿಷ್ಠ'
ಲಂಡನ್: ಭಾರತ ವಿರುದ್ಧ ಮೊದಲ ಎರಡು ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹೀನಾಯ ಸೋಲು ಅನುಭವಿಸಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕಿಂತ ಇಂಗ್ಲ್ಲೆಂಡ್ ತಂಡ ಬಲಿಷ್ಠವಾಗಿದೆ ಎಂದು ಇಂಗ್ಲೆಂಡ್ನ ಮಾಜಿ ನಾಯಕ ಮೈಕಲ್ ವಾನ್ ತಿಳಿಸಿದ್ದಾರೆ.
ಇದೇ ವರ್ಷ ನಡೆಯಲಿರುವ ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಆ್ಯಶಸ್ ಸರಣಿಯ ಹಿನ್ನೆಲೆಯಲ್ಲಿ, ಮೈಕಲ್ ವಾನ್ ಈ ಹೇಳಿಕೆ ನೀಡಿದ್ದಾರೆ.