ಗ್ರೇಮ್ ಸ್ವಾನ್ಗೆ ಗಾಯ
ಡುನೆದಿನ್: ಮುಂಬರುವ ಆ್ಯಶಸ್ ಸರಣಿಯನ್ನು ಕಾತುರದಿಂದ ಎದುರು ನೋಡುತ್ತಿದ್ದ ಇಂಗ್ಲೆಂಡ್ನ ಆಫ್ ಸ್ಪಿನ್ನರ್ ಗ್ರೇಮ್ ಸ್ವಾನ್ ಗಾಯಗೊಂಡಿದ್ದು, ಬುಧವಾರ ಆರಂಭವಾದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಸ್ವಾನ್ ಅವರ ಮೊಣಕೈ ನೋವು ಹೆಚ್ಚಾದ ಹಿನ್ನಲೆಯಲ್ಲಿ ಅವರು ಪಂದ್ಯದಿಂದ ಹೊರಗುಳಿದಿದ್ದು, ಶಸ್ತ್ರ ಚಿಕಿತ್ಸೆ ಮಾಡುವ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.