ಸ್ವಿಸ್ ಓಪನ್: ಸೈನಾಗೆ ಅಗ್ರ ಶ್ರೇಯಾಂಕ
ಬಸೆಲ್: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಪರಾಭವಗೊಂಡು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಮುಂಬರುವ ಸ್ವಿಸ್ ಓಪನ್ ಗೋಲ್ಡ್ ಗ್ರ್ಯಾನ್ ಪ್ರಿಕ್ಸ್ ಪಂದ್ಯಾವಳಿಯಲ್ಲಿ ಅಗ್ರ ಶ್ರೇಯಾಂಕ ಪಡೆದಿದ್ದು, ಹೋರಾಟಕ್ಕೆ ಎದುರು ನೋಡುತ್ತಿದ್ದಾರೆ.
ಹಾಲಿ ಚಾಂಪಿಯನ್ ಆಗಿರುವ ಸೈನಾ ನೆಹ್ವಾಲ್ ಈ ಬಾರಿಯೂ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು, ಮಾ.17 ರಂದು ಪಂದ್ಯಾವಳಿಯ ಫೈನಲ್ ಪಂದ್ಯ ನಡೆಯಲಿದೆ.