'ವಿಜೇಂದರ್ ತಪ್ಪುಮಾಡಿದ್ದರೆ ಶಿಕ್ಷೆ'
ನವದೆಹಲಿ: ಮಾದಕ ವಸ್ತು ಪ್ರಕರಣದಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ತಪ್ಪಿತಸ್ಥ ಎಂದು ಸಾಬೀತಾದರೆ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ.'ಸದ್ಯಕ್ಕೆ ಪ್ರಕರಣದ ಕುರಿತು ಪಂಜಾಬ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು' ಎಂದು ಸಿಂಗ್ ತಿಳಿಸಿದರು.
'ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲಿದ್ದಾರೆ. ಆದರೆ, ಪಂಜಾಬ್ ಪೊಲೀಸರೇ ಸೇರಿಕೊಂಡಿರುವ ಪ್ರಕರಣದ ಕುರಿತು ಪಂಜಾಬ್ ಪೊಲೀಸರೇ ತನಿಖೆಯನ್ನು ನಡೆಸುತ್ತಿದ್ದಾರೆ' ಎಂದು ಅವರು ಹೇಳಿದರು.