ಐಪಿಎಲ್ ಆರಂಭಕ್ಕೆ ರೆಡ್ ಚಿಲ್ಲೀಸ್
ನವದೆಹಲಿ: ಬಾಲಿವುಡ್ ಕಿಂಗ್ಶಾರೂಖ್ ಖಾನ್ ಅವರ ಒಡೆತದಕಂಪನಿ ರೆಡ್ ಚಿಲ್ಲೀಸ್ ಸಂಸ್ಥೆ ಇಂಡಿಯನ್ ಪ್ರೀಮಿಯರ್ ಲೀಗ್ನ 6ನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಿಕೊಡಲು ಒಪ್ಪಂದ ಮಾಡಿಕೊಂಡಿದೆ.
'ಕಾರ್ಯಕ್ರಮಗಳನ್ನು ಅದ್ಭುತವಾಗಿ ನಡೆಸಿಕೊಡಲು ಹೆಸರಾಗಿರುವ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದು ನಮಗೆ ಸಂತಸ ಉಂಟುಮಾಡಿದೆ' ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಹೇಳಿದ್ದಾರೆ. 'ಐಪಿಎಲ್ 2013ರ ಉದ್ಘಾಟನಾ ಕಾರ್ಯಕ್ರಮ ಅತ್ಯುತ್ತಮ ಕಾರ್ಯಕ್ರಮಗಳಲ್ಲಿ ಒಂದಾಗುವುದರಲ್ಲಿ ಎರಡು ಮಾತಿಲ್ಲ' ಎಂದು ಶುಕ್ಲಾ ತಿಳಿಸಿದರು. ಕೋಲ್ಕತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಏಪ್ರಿಲ್ 2ರಂದು ಐಪಿಎಲ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
---------