ಪಾಕ್ ತಂಡಕ್ಕೆ ಬ್ಯಾಟಿಂಗ್ ಕೋಚ್ ಬೇಕು
ಕರಾಚಿ: ಪಾಕಿಸ್ತಾನ ತಂಡವು ದಕ್ಷಿಣ ಆಫ್ರಿಕಾದ ಪ್ರವಾಸದಲ್ಲಿ ಹೀನಾಯ ಪ್ರದರ್ಶನ ನೀಡಲು ತಂಡದ ಬ್ಯಾಟ್ಸ್‌ಮನ್‌ಗಳ ವೈಫಲ್ಯವೇ ಕಾರಣ. ಹಾಗಾಗಿ ಪಾಕಿಸ್ತಾನ ತಂಡಕ್ಕೆ ಉತ್ತಮವಾದ ಬ್ಯಾಟಿಂಗ್ ಕೋಚ್ ಅಗತ್ಯವಿದೆ ಎಂದು ಪಾಕ್‌ನ ಮಾಜಿ ಆಟಗಾರ ಜಹೀರ್ ಅಬ್ಬಾಸ್ ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಪಾಕಿಸ್ತಾನ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ಮುಖಭಂಗ ಅನುಭವಿಸಲು ಪ್ರಮುಖ ಕಾರಣ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯತೆ ಕಾರಣ.ಹಾಗಾಗಿ ಬ್ಯಾಟಿಂಗ್ ಕೋಚ್ ಅವಶ್ಯಕತೆ ಇದೆ ಎಂದಿದ್ದಾರೆ ಅಬ್ಬಾಸ್.