ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ರ್ಯಾಂಕಿಂಗ್: ಎರಡನೇ ಸ್ಥಾನಕ್ಕೆ ತ್ರಿಕೋನ ಸ್ಪರ್ಧೆ

Mainashree
Updated On : 14 Mar 2013, 12:25 pm

ದುಬೈ: ಪ್ರಸಕ್ತ ಸಾಲಿನ ಟೆಸ್ಟ್ ಚಾಂಪಿಯನ್‌ಷಿಪ್‌ನ ರ್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕಾಗಿ ಭಾರತ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇನ್ನು ಭಾರತದ ಚೇತೇಶ್ವರ ಪೂಜಾರ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆದಿದ್ದಾರೆ.
ಪ್ರಸ್ತುತ ಸಾಲಿನ ಟೆಸ್ಟ್ ಚಾಂಪಿಯನ್‌ಷಿಪ್ ಪಟ್ಟಿಯ ಮೊದಲ ಸ್ಥಾನವನ್ನು ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ಭದ್ರಪಡಿಸಿಕೊಂಡಿದ್ದು, ಎರಡನೇ ಸ್ಥಾನಕ್ಕೆ ಭಾರತ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಪೈಪೋಟಿ ನಡೆಸುತ್ತಿದೆ. ಪ್ರಸ್ತುತ ಈ ಮೂರೂ ತಂಡಗಳು 13 ಅಂಕಗಳ ಅಂತರದಲ್ಲಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡ ನಂತರ ಈ ಮೂರು ತಂಡಗಳಲ್ಲಿ ಯಾವ ತಂಡ 2ನೇ ಸ್ಥಾನ ಗಳಿಸಲಿದೆ ಎಂದು ತಿಳಿದುಬರಲಿದೆ. ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ಭಾರತ ತಂಡ ಸರಣಿಯನ್ನು ದೊಡ್ಡ ಅಂತರದಲ್ಲಿ ಗೆದ್ದು, ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ವಿರುದ್ಧ ಸರಣಿ ಸೋತರೆ ಭಾರತ 2ನೇ ಸ್ಥಾನ ಗಳಿಸಲಿದೆ. ಒಂದು ವೇಳೆ ಇಂಗ್ಲೆಂಡ್ ಸೋತು, ಆಸ್ಟ್ರೇಲಿಯ ಸರಣಿಯನ್ನು ಡ್ರಾ ಮಾಡಿಕೊಂಡರೆ 2ನೇ ಸ್ಥಾನಕ್ಕೆ ಅವಕಾಶವಿದೆ. ಇಂಗ್ಲೆಂಡ್ ತಂಡ ಸರಣಿಯನ್ನು ಗೆದ್ದರೆ 2ನೇ ಸ್ಥಾನ ಇಂಗ್ಲೆಂಡ್ ಪಾಲಾಗಲಿದೆ. ಈ ಎರಡು ಸರಣಿ ಜತೆಗೆ ಪ್ರಸ್ತುತ ನಡೆಯುತ್ತಿರುವ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಹಾಗೂ ವೆಸ್ಟ್ ಇಂಡೀಸ್ ಹಾಗೂ ಜಿಂಬಾಂಬ್ವೆ ನಡುವಿನ ಸರಣಿಯು ರ್ಯಾಂಕಿಂಗ್ ಪಟ್ಟಿಯಲ್ಲಿ ಬದಲಾವಣೆ ತರಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement