ನಾನು ಐಪಿಎಲ್ಗೆ ಲಭ್ಯ: ಗಂಭೀರ್
ನವದೆಹಲಿ: ಜಾಂಡೀಸ್ನಿಂದ ಬಳಲುತ್ತಿರುವ ಗೌತಮ್ ಗಂಭೀರ್, ತಾನು ಐಪಿಎಲ್ ಆರಂಭಕ್ಕೂ ಮುನ್ನ ಗುಣಮುಖರಾಗಲಿದ್ದು ಪಂದ್ಯಾವಳಿಗೆ ಲಭ್ಯವಾಗಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್ನ ಆರಂಭಿಕ ಪಂದ್ಯಗಳಲ್ಲಿ ಗೌತಮ್ ಗಂಭೀರ್ ಅವರ ಅನುಪಸ್ಥಿತಿಯ ಭಯದಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನೆಮ್ಮದಿಯ ಉಸಿರುಬಿಟ್ಟಿದೆ. ಆದಷ್ಟು ಶೀಘ್ರವಾಗಿ ಗುಣಮುಖರಾಗುವುದಾಗಿ ತಿಳಿಸಿರುವ ಗಂಭೀರ್, ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಮತ್ತೆ ಮೈದಾನಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಹಾಗೆಯೇ ಐಪಿಎಲ್ನ ಆರಂಭಿಕ ಪಂದ್ಯದಿಂದ ಅಂತಿಮ ಪಂದ್ಯದ ವರೆಗೂ ಲಭ್ಯರಿರುವುದಾಗಿ ಗಂಭೀರ್ ತಿಳಿಸಿದ್ದಾರೆ. ಈ ವಿಷಯವನ್ನು ಗಂಭೀರ್ನ ಮ್ಯಾನೇಜರ್ ಕೂಡ ಖಚಿತಪಡಿಸಿದ್ದು, ಏ.3ರಂದು ನಡೆಯಲಿರುವ ಡೆಲ್ಲಿ ಡೇರ್ಡೆವಿಲ್ಸ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಗಂಭೀರ್ ಆಡಲಿದ್ದಾರೆ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.