ಕನಸು ನನಸಾಗಿದೆ: ವ್ಯಾಟ್ಸನ್
ನವದೆಹಲಿ: ತಂಡದ ನಾಯಕತ್ವ ವಹಿಸಿಕೊಂಡಿರುವುದು ಕನಸು ನನಸಾದಂತಾಗಿದೆ ಎಂದು ಆಸ್ಟ್ರೇಲಿಯಾ ತಂಡದ ಆಲ್ರೌಂಡರ್ ಶೇನ್ ವ್ಯಾಟ್ಸನ್ ಶುಕ್ರವಾರ ಹೇಳಿಕೊಂಡಿದ್ದಾರೆ.
ಆಸ್ಟ್ರೇಲಿಯಾ ತಂಡದ ನಾಯಕ ಮೈಕಲ್ ಕ್ಲಾಕ್ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ, ವ್ಯಾಟ್ಸನ್ ಅವರಿಗೆ ನಾಯಕತ್ವದ ಹೊಣೆಗಾರಿಕೆ ನೀಡಲಾಗಿದೆ.'ರಾಷ್ಟ್ರೀಯ ತಂಡದ ನಾಯಕತ್ವ ವಹಿಸಿಕೊಳ್ಳಲು ಅವಕಾಶ ನೀಡಿದ್ದು, ನನ್ನ ಕನಸು ನನಸಾದಂತಾಗಿದೆ. ಗಾಯದ ಹಿನ್ನೆಲೆಯಲ್ಲಿ ಮೈಕಲ್ ಕ್ಲಾರ್ಕ್ ಅಲಭ್ಯರಾಗಿರುವುದು ತಂಡಕ್ಕೆ ತೀವ್ರ ಬೇಸರ ಉಂಟುಮಾಡಿದೆ. ಆದರೆ, ಈ ಪಂದ್ಯದಲ್ಲಿ ನನಗೆ ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ನಿಭಾಯಿಸಲು ಎದುರು ನೋಡುತ್ತಿದ್ದೇನೆ' ಎಂದು ವ್ಯಾಟ್ಸನ್ ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.