ಕಾರ್ಯಕಾರಿ ಸಮಿತಿ ನೇಮಕ
ನವದೆಹಲಿ: ಕ್ರೀಡಾ ಸಂಸ್ಥೆಗಳಲ್ಲಿ ಉತ್ತಮ ಹಾಗೂ ಪಾರದರ್ಶಕ ಆಡಳಿತ ತರುವ ಉದ್ದೇಶದಿಂದ 2011ರಲ್ಲಿ ರೂಪಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಮಸೂದೆಯನ್ನು ಪರಿಷ್ಕರಿಸಲು ಕ್ರೀಡಾ ಸಚಿವಾಲಯ ನಿರ್ಧರಿಸಿದೆ. ಈ ಮಸೂದೆಯನ್ನು ಪರಿಷ್ಕರಿಸುವ ಸಲುವಾಗಿ 12 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಕ್ರೀಡಾ ಸಚಿವಾಲಯ ನೇಮಿಸಿದೆ. ಈ ಕಾಯ್ದೆಯ ಪರಿಷ್ಕರಣೆ ಬಗ್ಗೆ ಪ್ರಾಯೋಜಕರ ಜತೆ ಚರ್ಚೆ ನಡೆಸುವ ಅವಶ್ಯಕತೆ ಇದೆ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.
ಈ ರೀತಿಯ ಚರ್ಚೆಗಳನ್ನು ನಡೆಸಲು, ಪರಿಷ್ಕೃತ ಮಸೂದೆ ರೂಪಿಸಲು ಹಾಗೂ ಮಸೂದೆಯ ನೀತಿ ನಿಯಮಾವಳಿಗಳನ್ನು ನಡೆಸಲು ನ್ಯಾಯಮೂರ್ತಿ ಮುಕುಲ್ ಮುದ್ಗಲ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಮೇ.31ರ ಒಳಗಾಗಿ ಮಸೂದೆಯನ್ನು ರೂಪಿಸಲಿದ್ದು, ಆ.31ರ ಒಳಗೆ ನಿಯಮಾವಳಿಗಳನ್ನು ಸಲ್ಲಿಸಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.