ಹೊನಲು ಬೆಳಕಿನಲ್ಲಿ ಡೇವಿಸ್ಕಪ್ ಪಂದ್ಯಾವಳಿ
ಬೆಂಗಳೂರು: ಭಾರತ ಹಾಗೂ ಇಂಡೊನೇಶಿಯಾ ನಡುವಿನ ಏಷ್ಯಾ ಓಶಿಯಾನ್ ಡೆವಿಸ್ ಕಪ್ ಪಂದ್ಯಾವಳಿಯ ಪಂದ್ಯಗಳನ್ನು ಹೊನಲು ಬೆಳಕಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಏ.5 ರಿಂದ ಏ.7ರ ವರೆಗೆ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಈ ಪಂದ್ಯಾವಳಿ ನಡೆಯಲಿದೆ. ಮಧ್ಯಾಹ್ನದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಟೆನಿಸ್ ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸುವ ಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಖಿಲ ಭಾರತ ಟೆನಿಸ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯ ಕಾರ್ಯದಶಿಯಾದ ಸಿ.ಎಸ್ ಸುಂದರ್ ರಾಜು ತಿಳಿಸಿದ್ದಾರೆ. ಏ.5ರಂದು ಮೊದಲ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು, ನಂತರ ಸಿಂಗಲ್ಸ್ ಹಾಗೂ ಡಬಲ್ಸ್ ಪಂದ್ಯಗಳು ನಡೆಯಲಿವೆ. ಮೂರನೇ ಹಾಗೂ ಅಂತಿಮ ದಿನ ನಡೆಯಲಿರುವ ರಿವರ್ಸ್ ಸಿಂಗಲ್ಸ್ ಪಂದ್ಯಗಳು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.