'ಚೆನ್ನೈನ ಪಂದ್ಯ ನಡೆಸಲು ಸಿದ್ಧ'
ತಿರುವನಂತಪುರಂ: ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳಿಂದ ಶ್ರೀಲಂಕಾ ಆಟಗಾರರನ್ನು ತಮಿಳುನಾಡು ಸರ್ಕಾರ ಹೊರಗಿಡುವ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ, ಚೆನ್ನೈನಲ್ಲಿ ನಡೆಯಬೇಕಿರುವ ಐಪಿಎಲ್ ಪಂದ್ಯಗಳನ್ನು ಕೇರಳಕ್ಕೆ ಸ್ಥಳಾಂತರಿಸಿದರೆ, ತಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡುವುದಾಗಿ ಕೇರಳ ಸರ್ಕಾರ ಘೋಷಿಸಿದೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ, 'ಚೆನ್ನೈನಲ್ಲಿ ನಡೆಯಬೇಕಿರುವ ಐಪಿಎಲ್ ಪಂದ್ಯಗಳನ್ನು ಕೇರಳಕ್ಕೆ ಸ್ಥಳಾಂತರಿಸಲು ಬಿಸಿಸಿಐ ನಿರ್ಧರಿಸಿದರೆ, ಕೊಚ್ಚಿಯಲ್ಲಿ ಪಂದ್ಯಗಳನ್ನು ನಡೆಸಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತದೆ' ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.