ಪೂಜಾರ ಏಕದಿನದಲ್ಲೂ ಯಶಸ್ವಿಯಾಗಲಿದ್ದಾರೆ: ದ್ರಾವಿಡ್
ನವದೆಹಲಿ: ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕದ ಆಧಾರ ಸ್ತಂಭ ಎಂಬ ಖ್ಯಾತಿ ಪಡೆದಿದ್ದ ರಾಹುಲ್ ದ್ರಾವಿಡ್, ತಮ್ಮ ನಿವೃತ್ತಿ ನಂತರ ಆ ಸ್ಥಾನವನ್ನು ತುಂಬುತ್ತಿರುವ ಯುವ ಆಟಗಾರ ಚೇತೇಶ್ವರ ಪೂಜಾರ ಅವರ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಏಕದಿನದಲ್ಲೂ ಪೂಜಾರ ಯಶಸ್ವಿಯಾಗಲಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಇದುವರೆಗೂ 13 ಟೆಸ್ಟ್ ಪಂದ್ಯಗಳನ್ನಾಡಿರುವ 65ರ ಸರಾಸರಿಯನ್ನು ಹೊಂದಿದ್ದು, ನಾಲ್ಕು ಶತಕ ಹಾಗೂ ಮೂರು ಅರ್ಧಶತಕಗಳಿಸಿ ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ಆರಂಭ ಪಡೆದಿದ್ದಾರೆ. ಜತೆಗೆ ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿನ ಅವರ ಆರಂಭ ದ್ರಾವಿಡ್‌ರಂತೆಯೇ ಇದೆ. ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ ನನಗಿಂತಲೂ ಉತ್ತಮ ಆರಂಭ ಪಡೆದಿದ್ದು, ತನ್ನ ಆಟದ ಶೈಲಿ ಹಾಗೂ ತಾಂತ್ರಿಕ ಹೊಡೆತಗಳನ್ನು ಬೆಳೆಸಿಕೊಳ್ಳುತ್ತಿದ್ದಾರೆ ಎಂದು ದ್ರಾವಿಡ್ ತಿಳಿಸಿದರು.
ಪೂಜಾರ ಇದುವರೆಗೂ ಏಕದಿನ ಪಂದ್ಯದಳಿಗೆ ಪದಾರ್ಪಣೆ ಮಾಡಿಲ್ಲ. ಆದರೆ ದೇಶೀಯ ಪಂದ್ಯಗಳಲ್ಲಿ ಉತ್ತಮ ಸಾಧನೆ ಮಾಡಿರುವ ಪೂಜಾರ 61 ಪಂದ್ಯಗಳಲ್ಲಿ 56.97ರ ಸರಾಸರಿಯಲ್ಲಿ ರನ್‌ಗಳಿಸಿದ್ದು, 8 ಶತಕ ಹಾಗೂ 17 ಅರ್ಧಶತಕ ಗಳಿಸಿದ್ದಾರೆ. ಪೂಜಾರ ಏಕದಿನ ಕ್ರಿಕೆಟ್‌ನಲ್ಲೂ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ತಮ್ಮ ಏಕದಿನ ಕ್ರಿಕೆಟ್‌ನಲ್ಲಿರುವ ಸವಾಲಿಗೆ ಅವರು ಉತ್ತರ ಕಂಡುಕೊಳ್ಳಲಿದ್ದಾರೆ ಎಂದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.