ನಿರ್ದಿಷ್ಟ ಗುರಿ ಹೊಂದಿಲ್ಲ: ಸಚಿನ್
ಮುಂಬೈ: ಐಪಿಎಲ್ 6ನೇ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿ, ಪ್ರಶಸ್ತಿ ಗೆಲ್ಲುವುದನ್ನು ಹೊರತುಪಡಿಸಿ ಯಾವುದೇ ನಿರ್ದಿಷ್ಟ ಗುರಿ ಹೊಂದಿಲ್ಲ ಎಂದು ಮುಂಬೈ ಇಂಡಿಯನ್ಸ್ ಸ್ಟಾರ್ ಆಟಗಾರ ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ. ಗುರಿ ಇಟ್ಟುಕೊಳ್ಳಲು ಇಷ್ಟಪಡುವುದಿಲ್ಲ, ಒಂದು ವೇಳೆ ಗುರಿ ಹೊಂದಿದರೂ ಈ ವಿಷಯದಲ್ಲಿ ಸ್ವಲ್ಪ ಮೂಢನಂಬಿಕೆ ಹೊಂದಿರುತ್ತೇನೆ ಎಂದು ಸಚಿನ್ತಿಳಿಸಿದ್ದಾರೆ. ಪ್ರಶಸ್ತಿ ಗೆಲ್ಲುವುದು ನಮ್ಮ ತಂಡದ ಗುರಿ, ನಾವು ನಮ್ಮ ಸಂಪೂರ್ಣ ಪ್ರಯತ್ನದೊಂದಿಗೆ ಉತ್ತಮ ಪ್ರದರ್ಶನ ನೀಡಲು ಬಯಸುತ್ತೇವೆ. ಪ್ರಶಸ್ತಿಯನ್ನು ಗೆದ್ದು ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಲು ಇಚ್ಛಿಸುತ್ತೇವೆ ಎಂದು ಅವರು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.