ಕ್ರೀಡೆ

ಬಾಂಗ್ಲಾ ವಿರುದ್ಧದ ಸರಣಿಗೆ ಭಾರತ ವನಿತೆಯರ ತಂಡ ಪ್ರಕಟ: ಹರ್ಮನ್‌ಪ್ರೀತ್ ನಾಯಕಿ

ನವದೆಹಲಿ: ಬಾಂಗ್ಲಾದೇಶದ ವಿರುದ್ಧ ಏ.2 ರಿಂದ ತವರಿನಲ್ಲಿ ಭಾರತ ತಂಡ ಟಿ20 ಹಾಗೂ ಏಕದಿನ ಸರಣಿಯನ್ನಾಡಲಿದ್ದು, ಈ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಿರುವ ಆಯ್ಕೆ ಸಮಿತಿ ಹರ್ಮನ್‌ಪ್ರೀತ್ ಕೌರ್ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.    ಅಖಿಲ ಭಾರತ ಮಹಿಳಾ ಕ್ರಿಕೆಟ್ ಆಯ್ಕೆ ಸಮಿತಿಯು ಮಹಿಳಾ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಮಿಥಾಲಿ ರಾಜ್ ಅವರನ್ನು 15 ಆಟಗಾರ್ತಿಯರ ತಂಡದಿಂದ ಕೈಬಿಡಲಾಗಿದ್ದು, ಆರಂಭಿಕ ಆಟಗಾರ್ತಿ ಪೂನಂ ರಾವತ್ ಅವರನ್ನು ತಂಡದ ಉಪ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಇದೇ ಫೆಬ್ರವರಿಯಲ್ಲಿ ತವರಿನಲ್ಲಿ ನಡೆದ ಮಹಿಳಾ ವಿಶ್ವಕಪ್‌ನಲ್ಲಿ ಹೀನಾಯ ಪ್ರದರ್ಶನದ ಮೂಲಕ ಮೊದಲ ಸುತ್ತಿನಲ್ಲೇ ಪಂದ್ಯಾವಳಿಯಿಂದ ಹೊರಗುಳಿದ ಭಾರತ ವನಿತೆಯರ ತಂಡ, ಈಗ ಮತ್ತೇ ತವರಿನಲ್ಲಿ ಬಾಂಗ್ಲಾದೇಶ ವನಿತೆಯರ ತಂಡದ ವಿರುದ್ಧ 3 ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿಯನ್ನಾಡಲಿದೆ.
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಪೂನಂ ರಾವತ್ (ಉಪ ನಾಯಕಿ), ಎಂ.ಡಿ ತಿರುಶ್ಕಾಮಿನಿ, ಸ್ಮೃತಿ ಮಂಧನ, ಅನಘ ದೇಶಪಾಂಡೆ, ಸ್ನೇಹ ದೀಪ್ತಿ, ಮೊನಾ ಮೆಶ್ರಾಂ, ಎನ್. ನಿರಂಜನಾ, ಅರ್ಚನಾ ದಾಸ್, ಪೂನಂ ಯಾಧವ್, ರೀತು ಧ್ರುವ್, ಸ್ವಾಗತಿಕ ರತ್, ಶುಭಲಕ್ಷ್ಮಿ ಶರ್ಮಾ, ಸುಷ್ಮಾ ವರ್ಮಾ, ಎಕ್ತ್ ಬಿಷ್ಟ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!