ಕ್ರೀಡೆ

ಲಂಕಾ ವಿರುದ್ಧ ಬಾಂಗ್ಲಾದೇಶಕ್ಕೆ ರೋಚಕ ಜಯ: ಸರಣಿ ಸಮಬಲ

ಪಲ್ಲೆಕೆಲೆ: ಮಳೆ ಅಡ್ಡಿಯಿಂದ ಡಕ್ವರ್ತ್ ಲೂಯಿಸ್ ನಿಯಮ ಅಳವಡಿಸಲಾದ 3ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ 3 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ, ತಿಲಕರತ್ನೆ ದಿಲ್ಷಾನ್ (125) ಅಮೋಘ ಶತಕದ ನೆರವಿನೊಂದಿಗೆ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 302 ರನ್ ಗಳಿಸಿತು. ಆದರೆ, ನಂತರ ಬಾಂಗ್ಲಾ 13.4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 78 ರನ್ ಗಳಿಸುತ್ತಿದ್ದಂತೆ ಮಳೆ ಆರಂಭವಾಯಿತು. ಹೀಗಾಗಿ ಪಂದ್ಯವನ್ನು ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 27 ಓವರ್‌ಗಳಿಗೆ ಸೀಮಿತಗೊಳಿಸಿ 183 ರನ್‌ಗಳ ಗುರಿ ನೀಡಲಾಯಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾ 7 ವಿಕೆಟ್ ಕಳೆದುಕೊಂಡು ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ 184 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಹೀಗಾಗಿ ಲಂಕಾದ ದಿಲ್ಷಾನ್ ಶತಕ ವ್ಯರ್ಥವಾಯಿತು.ಇದರೊಂದಿಗೆ 3 ಪಂದ್ಯಗಳ ಸರಣಿ 1-1 ಅಂತರದಿಂದ ಸಮಬಲಗೊಂಡಿತು.
ಶ್ರೀಲಂಕಾ 302/9 (50 ಓವರ್)
ದಿಲ್ಷಾನ್ 125, ಪೆರೆರಾ 56
ಬೌಲಿಂಗ್: ರಜಾಕ್ 62/5, ಮೊಹ್ಮದುಲ್ಲಾ 50/1
ಬಾಂಗ್ಲಾ 184/7 (26 ಓವರ್)
ಅನಾಮುಲ್ ಹಕ್ 40, ನಾಸೀರ್ ಹುಸೇನ್ 33
ಬೌಲಿಂಗ್: ಮಲಿಂಗಾ 29/2, ಸೇನಾನಾಯಕೆ 26/2

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ

‘Gen Z ಪ್ರತಿಭಟನೆಗಳಿಂದ ಮೋದಿ ಸರ್ಕಾರಕ್ಕೆ ನಡುಕ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ