ಕ್ರೀಡೆ

ಪ್ರಶಸ್ತಿಗಾಗಿ ಸೆರೆನಾ, ಶರಪೋವಾ ಸೆಣಸು

ಐದು ಬಾರಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿರುವ ಅಮೆರಿಕದ ಸೆರೆನಾ ವಿಲಿಯಮ್ಸ್ ಈ ಬಾರಿಯೂ ಮಿಯಾಮಿ ಓಪನ್ ಪ್ರಶಸ್ತಿ ಗೆಲ್ಲುವ ಕಾತರದಲ್ಲಿದ್ದಾರೆ...

ಮಿಯಾಮಿ: ಐದು ಬಾರಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿರುವ ಅಮೆರಿಕದ ಸೆರೆನಾ ವಿಲಿಯಮ್ಸ್ ಈ ಬಾರಿಯೂ ಮಿಯಾಮಿ ಓಪನ್ ಪ್ರಶಸ್ತಿ ಗೆಲ್ಲುವ ಕಾತರದಲ್ಲಿದ್ದಾರೆ.  ಫೈನಲ್ ಪಂದ್ಯದಲ್ಲಿ ಮರಿಯಾ ಶರಪೋವಾ ಅವರನ್ನು ಎದುರಿಸಲಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ತಮ್ಮ ಎದುರಾಳಿ ಅಗ್ನಿಸ್ಕಾ ರಡ್ವಾಂಸ್ಕಾ ಅವರನ್ನು 6-0, 6-3 ಸೆಟ್‌ಗಳ ಅಂತರದಿಂದ ಮಣಿಸುವ ಮುಲಕ ಸೆರೆನಾ ಫೈನಲ್ ಹಂತಕ್ಕೆ ಲಗ್ಗೆ ಇಟ್ಟಿದ್ದಾರೆ. ಫೈನಲ್‌ನಲ್ಲಿ ನಂ.1 ಆಟಗಾರ್ತಿ ಸೆರೆನಾ ನಾಲ್ಕು ಬಾರಿ ರನ್ನರ್ ಅಪ್ ಆಗಿರುವ ಮರಿಯಾ ಶರಪೋವಾ ವಿರುದ್ಧ ಶನಿವಾರ ಪ್ರಶಸ್ತಿಗಾಗಿ ಕಾದಾಟ ನಡೆಸಲಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ಪ್ರಯಾಸದ ಜಯಗಳಿಸಿದ್ದ ಸೆರೆನಾ, ತಮ್ಮ ಸೆಮಿಫೈನಲ್ ಪಂದ್ಯದಲ್ಲಿ ಯಾವುದೇ ತಪ್ಪುಗಳನ್ನು ಮಾಡದೆ ಉತ್ತಮ ಅಂತರದಲ್ಲಿ ಜಯ ಗಳಿಸಿದ್ದಾರೆ.   ಇತ್ತ ಮರಿಯಾ ಶರಪೋವಾ ಕೂಡ ತಮ್ಮ ಸೆಮಿಫೈನಲ್ ಪಂದ್ಯದಲ್ಲಿ ಜೆಲೆನಾ ಜಾಂಕೊವಿಚ್ ಅವರನ್ನು 6-2, 6-1 ಸೆಟ್‌ಗಳ ಅಂತರದಲ್ಲಿ ಮಣಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಪ್ರಶಸ್ತಿ ಗೆಲ್ಲಲು ತುದಿಗಾಲಲ್ಲಿ ನಿಂತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್